ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ : ವರ್ಗಾವಣೆಗೊಂಡ ಉಪನ್ಯಾಸಕರುಗಳಿಗೆ ಬೀಳ್ಕೊಡುಗೆ ಕಾರ್‍ಯಕ್ರಮ

0


ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಂದ ವರ್ಗಾವಣೆಗೊಂಡ ಉಪನ್ಯಾಸಕರುಗಳಿಗೆ ಬೀಳ್ಕೊಡುಗೆ ಕಾರ್‍ಯಕ್ರಮ ಆ. ೧೫ರಂದು ಕಾಲೇಜಿನಲ್ಲಿ ನಡೆಯಿತು.


ವಾಣಿಜ್ಯ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ಡಿ ಹಾಗೂ ಗಣಿತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಗಾಯತ್ರಿ ಪಿ. ಕನ್ನಡ ವಿಭಾಗದ ಸಹ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ ರಾಶಿ ಎಂ ಇವರುಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಸತೀಶ್ ಕುಮಾರ್ ಕೆ ಆರ್ ಹಾಗೂ ಹಿರಿಯ ಉಪನ್ಯಾಸಕಿ ಶ್ರೀಮತಿ ಜಯಶ್ರೀ ಇವರು ಶಾಲು ಹೊದೆಸಿ ಹಾರ ಹಾಕಿ ಸ್ಮರಣಿಕೆ ನೀಡಿ ಗೌರವಿಸಿದರು. ಉಪನ್ಯಾಸಕ ವೃಂದದವರು ಸಹಕರಿಸಿದರು.