ಜಾಲ್ಸೂರು ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರುಗಳಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಆ.17ರಂದು ಜರುಗಿತು.
ಪರಿಶಿಷ್ಟ ಜಾತಿ ಸ್ಥಾನದಿಂದ ಸದಸ್ಯರಾಗಿ ಆಯ್ಕೆಯಾಗಿ, ಕಳೆದ ಎರಡೂವರೆ ವರ್ಷಗಳ ಅವಧಿಗೆ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿದ್ದ ಕೆ.ಎಂ. ಬಾಬು ಕದಿಕಡ್ಕ ಹಾಗೂ ಹಿಂದುಳಿದ ವರ್ಗ ಎ ಮಹಿಳಾ ಸ್ಥಾನದಿಂದ ಆಯ್ಕೆಯಾಗಿ ಉಪಾಧ್ಯಕ್ಷೆಯಾಗಿದ್ದ ಶ್ರೀಮತಿ ಲೀಲಾವತಿ ವಿನೋಬನಗರ ಅವರು ಪ್ರಸ್ತುತ ಮೀಸಲಾತಿಯಂತೆ ಹಿಂದುಳಿದ ವರ್ಗ ಎ ಮಹಿಳಾ ಸ್ಥಾನದಿಂದ ಸದಸ್ಯರಾಗಿ ಪ್ರಸ್ತುತ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ತಿರುಮಲೇಶ್ವರಿ ಮರಸಂಕ ಹಾಗೂ ಹಿಂದುಳಿದ ಬಿ ಮಹಿಳಾ ಸ್ಥಾನದಿಂದ ಆಯ್ಕೆಯಾಗಿ ಪ್ರಸ್ತುತ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೆ.ಪಿ. ಸುಬ್ಬಯ್ಯ, ಕಾರ್ಯದರ್ಶಿ ಸುಂದರ ಮುಪ್ಪೇರ್ಯ, ನಿರ್ಗಮಿತ ಅಧ್ಯಕ್ಷ ಕೆ.ಎಂ. ಬಾಬು, ನಿರ್ಗಮಿತ ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಸದಸ್ಯರಾದ ಎನ್.ಎಂ. ಸತೀಶ ಕೆಮನಬಳ್ಳಿ, ಶ್ರೀಮತಿ ಸಾವಿತ್ರಿ ಅಡ್ಕಾರುಬೈಲು, ಮುಜೀಬ್ ಪೈಚಾರು, ಈಶ್ವರ ನಾಯ್ಕ ಸೋಣಂಗೇರಿ, ಶ್ರೀಮತಿ ಅಂಬಿಕಾ ಕುಕ್ಕಂದೂರು ಬಿಜೆಪಿ ಜಾಲ್ಸೂರು ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿ ಹೇಮಂತ್ ಮಠ ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸಹಕರಿಸಿದರು.