ಕಲ್ಲುಗುಂಡಿ ಮೂಲದ ಕಿರಣ್ ಕ್ರಾಸ್ತಾ (33 ವರ್ಷ) ಆಗಸ್ಟ್ 8 ರಂದು ಕಾಣೆಯಾಗಿದ್ದು, ಅವರನ್ನು ಹುಡುಕಿ ಕೊಡುವಂತೆ ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಕಾಣೆಯಾಗಿರುವ ವ್ಯಕ್ತಿ ಈ ಮೊದಲು ಬೆಂಗಳೂರು ಮೊದಲಾದ ಕಡೆಗಳಲ್ಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ ಕಳೆದ ಒಂದು ತಿಂಗಳ ಹಿಂದೆ ಸುಳ್ಯಕ್ಕೆ ಬಂದಿದ್ದು ಸುಳ್ಯದ ಹೋಟೆಲ್ ಒಂದರಲ್ಲಿ ಕೆಲಸಕ್ಕೆ ನಿಂತಿದ್ದರು ಎನ್ನಲಾಗಿದೆ.
ಇದೀಗ ಅವರು ಕಾಣೆಯಾಗಿ ಒಂದು ವಾರ ಕಳೆದರೂ ಎಲ್ಲಿಯೂ ಪತ್ತೆಯಾಗದ ಕಾರಣ ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ವ್ಯಕ್ತಿಯನ್ನು ಕಂಡುಬಂದಲ್ಲಿ ಪೊಲೀಸ್ ಠಾಣೆಗೆ ತಿಳಿಸುವಂತೆ ಸುಳ್ಯ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.