ಸುಳ್ಯದ ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 17ರಂದು ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಮತ್ತು ಶ್ರೀ ಶಾರದಾ ಮಹಿಳಾ ಪದವಿಪೂರ್ವ ಕಾಲೇಜು, ಸುಳ್ಯ ಇದರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕು.ಅರ್ಪಿತಾ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ತಾಲೂಕು ಸೇವೆಗಳು ಸಮಿತಿ, ಸುಳ್ಯ ಇವರು ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿನಿಯರಿಗೆ ಕಾನೂನು ಮಾಹಿತಿ ನೀಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಹಿರಿಯ ವಕೀಲರಾದ ಜಗದೀಶ ಹುದೇರಿಯವರು ‘ಪೋಕ್ಸೊ ಕಾಯಿದೆ ಮತ್ತು ಮಹಿಳೆಯರ ಹಕ್ಕುಗಳು ಕುರಿತು’ ವಿಶೇಷ ಉಪನ್ಯಾಸ ನೀಡಿದರು.ಮುಖ್ಯ ಅತಿಥಿಯಾಗಿ ನಾರಾಯಣ. ಕೆ .ಅಧ್ಯಕ್ಷರು ವಕೀಲರ ಸಂಘ, ಸುಳ್ಯ, ಆರೋನ ಡಿ ‘ಸೋಜಾ ಸಹಾಯಕ ಸರ್ಕಾರಿ ಅಭಿಯೋಜಕರು, ಕುಮಾರಿ ಲೋಲಾಕ್ಷಿ ಪ್ಯಾನಲ್ ವಕೀಲರು, ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ .ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಉಪನ್ಯಾಸಕಿ ಶ್ರೀಮತಿ ಸ್ವರ್ಣಕಲಾ.ಎ. ಎಸ್ ಸ್ವಾಗತಿಸಿ, ಉಪನ್ಯಾಸಕ ಬಾಲಕೃಷ್ಣ.ಕೆ ಧನ್ಯವಾದ ಸಮರ್ಪಿಸಿದರು. ಉಪನ್ಯಾಸಕ ಪ್ರಸನ್ನ.ಎನ್. ಎಚ್. ಕಾರ್ಯಕ್ರಮ ನಿರೂಪಿಸಿದರು.