ಕನಕಮಜಲು ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರಶಸ್ತಿ

0

ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ಕಾರ್ಯಚಟುವಟಿಕೆ ಹಾಗೂ ಗಣನೀಯ ಸೇವೆಯನ್ನು ಪರಿಗಣಿಸಿ ದ.ಕ. ಜಿಲ್ಲಾ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ. ಆ.19ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಜಿಲ್ಲಾ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ನಾರಾಯಣ ಬೊಮ್ಮೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಹಿತ್ ಕುಮಾರ್ ಕುದ್ಕುಳಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ಕರುಣಾಕರ ರೈ ಕುಕ್ಕಂದೂರು, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಸ್ವರೂಪ್ ಪಿ.ಆರ್. ಕದಿಕಡ್ಕ, ಸಂಘದ ನಿರ್ದೇಶಕ ಶೇಷಪ್ಪ ನಾಯ್ಕ ಕಜೆಗದ್ದೆ ಉಪಸ್ಥಿತರಿದ್ದರು.