ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

0

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಆ.19 ರಂದು ಮಂಗಳೂರಿನಲ್ಲಿ ನಡೆದಿದ್ದು ಕಲ್ಮಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸೇವೆಯನ್ನು ಪರಿಗಣಿಸಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ದೊರೆತಿದೆ. ಡಿಸಿಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ಮಾಡಿದರು


ಕಲ್ಮಡ್ಕ ಪ್ರಾಥಮಿಕ ಪ್ರಾ. ಕೃ. ಪ. ಸಹಕಾರ ಸಂಘದ ಉಪಾಧ್ಯಕ್ಷ ಲಕ್ಷ್ಮೀನಾರಾಯಣ ನಡ್ಕ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಜೆ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಉದಯ ಕುಮಾರ್ ಬೆಟ್ಟ, ವಲಯ ಮೇಲ್ವಿಚಾರಕ ಪ್ರದೀಪ್ ಕೆ,ಸಿಬ್ಬಂದಿ ಪುನೀತ್ ಕುಮಾರ್ ಯಂ. ವಿ.ಉಪಸ್ಥಿತರಿದ್ದರು.