ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ

0

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಇಂದು ಮಂಗಳೂರಿನಲ್ಲಿ ನಡೆದಿದ್ದು ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಮಗ್ರ ವ್ಯವಹಾರ ಪರಿಗಣಿಸಿ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಲಭಿಸಿದೆ. ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರಧಾನ ನೆರವೇರಿಸಿದರು. ಆಲೆಟ್ಟಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಕರುಣಾಕರ ಹಾಸ್ಪಾರೆ, ಮಾಜಿ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನಕರ ಎ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.