ಪಂಜ :ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಚಿತ ಯಕ್ಷಗಾನ ತರಬೇತಿ ಉದ್ಘಾಟನೆ

0

ಪಂಜ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ
ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು
ಯಕ್ಷದ್ರುವ-ಯಕ್ಷ ಶಿಕ್ಷಣ
ನಾಟ್ಯ ತರಬೇತಿ ಶಿಕ್ಷಣ ಅಭಿಯಾನ
2023-24
ಉಚಿತ ಯಕ್ಷಗಾನ ತರಬೇತಿ ಉದ್ಘಾಟನಾ ಕಾರ್ಯಕ್ರಮ ಆ.16 ರಂದು ನಡೆಯಿತು.


ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ಉದ್ಘಾಟಿಸಿದರು . ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ ಕಲ್ಕ, ನಿಕಟ ಪೂರ್ವಾಧ್ಯಕ್ಷೆ ಶ್ರೀಮತಿ ಪೂರ್ಣಿಮಾ ದೇರಾಜೆ ,ತರಬೇತುದಾರ ಗಿರೀಶ್ , ಪ್ರೀತಮ್ ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು ಚಲಪತಿ ವಿ ಸ್ವಾಗತಿಸಿದರು, ಮಂಗಳೂರು
ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಸತೀಶ್ ಪಟ್ಲ ಪ್ರಾಸ್ತಾವಿಕವಾಗಿ ಮಾತಾಡಿದರು. ಶಿಕ್ಷಕ ರವೀಂದ್ರ ಗಣಪತಿ ನಿರೂಪಿಸಿದರು.ಶಿಕ್ಷಕಿ ಚೈತ್ರಾ ವಂದಿಸಿದರು.