ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನಿಷಿಯನ್ ಹಾಗೂ ಡಿ ಗ್ರೂಪ್ ನೌಕರನ್ನು ನೇಮಿಸಲು ಅರಂತೋಡು ಪಂಚಾಯತ್ ಉಪಾಧ್ಯಕ್ಷ ಅಶ್ರಫ್ ಗುಂಡಿಯವರು ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ ನೀಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರವು ಕೇಂದ್ರ ಸ್ಥಾನದಲ್ಲಿದ್ದು ಸಂಪಾಜೆ, ತೊಡಿಕಾನ, ಆಲೆಟ್ಟಿ, ಅಷ್ಟಾವರ ಮರ್ಕಂಜ ಗ್ರಾಮಗಳ ಗ್ರಾಮಸ್ಥರ ಆರೋಗ್ಯ ಕೇಂದ್ರವಾಗಿದೆ. ಈ ಕೇಂದ್ರದಲ್ಲಿ ದಿನಾಂ ಪ್ರತಿ ಸಾವಿರಾರು ರೋಗಿಗಳು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಈ ಕೇಂದ್ರದಲ್ಲಿ ವೈದ್ಯರೊಬ್ಬರ ಕರ್ತವ್ಯವನ್ನು ನಿರ್ವಹಿಸುತ್ತಿದ್ದು ರೋಗಿಗಳ ಆರೈಕೆಯೊಂದಿಗೆ ಇನ್ನಿತರ ಕೆಲಸಗಳನ್ನು ನಿರ್ವಹಿಸುವ ಅನಿವಾರ್ಯತೆ ಒದಗಿ ಬಂದಿದೆ. ಹಲವಾರು ವರ್ಷದಿಂದ ಕೇಂದ್ರಕ್ಕೆ ಸ್ಟಾಪ್ ನರ್ಸಿನ ಬೇಡಿಕೆಯಿದ್ದು ಇದುವರೆಗೆ ನೇಮಕವಾಗಿರುವುದಿಲ್ಲ, ಲ್ಯಾಬ್ ಟೆಕ್ನಿಷಿಯನ್, ಡಿ ಗ್ರೂಪ್ ನೌಕರ ಹುದ್ದೆಯು ಖಾಲಿಯಾಗಿದ್ದು ನೇಮಕಗೊಂಡಿರುವುದಿಲ್ಲ. ಆದುದರಿಂದ ಅರಂತೋಡು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೂಡಲೆ ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನಿಷಿಯನ್ ಹಾಗೂ ಡಿ ಗ್ರೂಪ್ ನೌಕರನ್ನು ನೇಮಕಗೊಳಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.