ನೆಟ್ಟಾರು ಶಾಲೆಯಲ್ಲಿ ಸುದ್ದಿ ಸಮೂಹ ಸಂಸ್ಥೆ ವತಿಯಿಂದ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ

0

ಸುದ್ದಿ ಸಮೂಹ ಸಂಸ್ಥೆ ,ಷರಾ ಪ್ರಕಾಶನ ಸುಳ್ಯ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಪ್ರಬಂದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮವು ನೆಟ್ಟಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.22 ರಂದು ನಡೆಯಿತು.


ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್ ಕೆರೆ ಪ್ರಸ್ತಾವಿಕವಾಗಿ ಮಾತನಾಡಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸುದ್ದಿ ಪತ್ರಿಕೆಯ ವರದಿಗಾರರಾದ ಗಣೇಶ್ ಕುಕ್ಕುದಡಿ,ಕುಶಾಂತ್ ಕೊರತ್ಯಡ್ಕ,ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ನಳಿನಾಕ್ಷಿ ಹಾಗು ಶಿಕ್ಷಕ ವೃಂದದವರು,
ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.