ಆ. 25: ಬೆಳ್ಳಾರೆಯಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಬೆಳ್ಳಾರೆ
ಇದರ ಆಶ್ರಯದಲ್ಲಿ
ಶ್ರೀ ವರಮಹಾಲಕ್ಷ್ಮೀ ಪೂಜೆ ಆ. 25ರಂದು ಬೆಳಿಗ್ಗೆ 8.30ರಿಂದ ಬೆಳ್ಳಾರೆಯ ಅಜಪಿಲ ಶ್ರೀ ಮಹಾಲಿಂಗೇಶ್ವರ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 8-00ಕ್ಕೆ ಕಲಶ ಸ್ಥಾಪನೆ, ಪಾರಾಯಣ, ಕುಂಕುಮಾರ್ಚನೆ, ಮಧ್ಯಾಹ್ನ 11.30ಕ್ಕೆ ಮಹಾಪೂಜೆ, ಮಂಗಳಾರತಿ ನಡೆಯಲಿದೆ. ಸೇವೆಯಲ್ಲಿ ಭಾಗವಹಿಸುವವರು ರೂ. 150 ಪಾವತಿಸಿ ಪೂಜಾ ಸಾಮಗ್ರಿಗಳೊಂದಿಗೆ ಆಗಮಿಸುವಂತೆ ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಅಧ್ಯಕ್ಷ ಬಿ. ಸುಬ್ರಹ್ಮಣ್ಯ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.