ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂದ್ರಯಾನ ಯಶಸ್ವಿಗಾಗಿ ವಿಶೇಷ ಪ್ರಾರ್ಥನೆ

0

ಬಾಹ್ಯಾಕಾಶ ಯೋಜನೆ ಚಂದ್ರಯಾನವು ಇಂದು ಚಂದ್ರನಲ್ಲಿ ಇಳಿಯಲಿದ್ದು, ಇದರ ಯಶಸ್ಸಿಗಾಗಿ ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ದಲ್ಲಿ ಆ.23ರಂದು ಮಧ್ಯಾಹ್ನ ಶ್ರೀ ಸುಬ್ರಹ್ಮಣ್ಯ ಸ್ವಾಮಿಗೆ ಪೂಜೆಯ ನಂತರ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಈಶ್ವರ ಭಟ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಹಿರಿಯ ಉದ್ಯಮಿ ಉಪೇಂದ್ರ ಕಾಮತ್ ವಿನೋಬನಗರ, ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್ ವಿನೋಬನಗರ ಸೇರಿದಂತೆ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.