ಪಂಜ: ಶ್ರೀ ವರಮಹಾಲಕ್ಷ್ಮೀ ಪೂಜೆ

0


ಪಂಜ ಸೀಮಾ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ-2023 ಇದರ ವತಿಯಿಂದ 11ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ಆ.25.ರಂದು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ಸಭಾಭವನದಲ್ಲಿ ಜರುಗಿತು.

ಬೆಳಿಗ್ಗೆ ಶ್ರೀ ವರಮಹಾಲಕ್ಷ್ಮೀ ಪೂಜೆ
ಆರಂಭಗೊಂಡು ,ಭಜನಾ ಸಂಕೀರ್ತನೆ,ಮಧ್ಯಾಹ್ನ ಮಹಾಪೂಜೆ,ಪ್ರಸಾದ ವಿತರಣೆ , ಅನ್ನಸಂತರ್ಪಣೆ ಜರುಗಿತು.
ಪೂಜಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸವಿತಾ ಸಂಪ, ಕಾರ್ಯದರ್ಶಿ ಶ್ರೀಮತಿ ತಿರುಮಲೇಶ್ವರಿ ಕಕ್ಯಾನ, ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಪಾಲ್ಗೊಂಡಿದ್ದರು.