ಆಲೆಟ್ಟಿ ಸದಾಶಿವ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

0

ಆಲೆಟ್ಟಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.25 ರಂದು ನಡೆಯಿತು.


ಬೆಳಗ್ಗೆ ದೇವರಿಗೆ
ದೇವಸ್ಥಾನದ ಪ್ರಧಾನ ಅರ್ಚಕ ಹರ್ಷಿತ್ ಬನ್ನಿಂತಾಯ ರವರು ಪೂಜೆಯನ್ನು ನೆರವೇರಿಸಿದರು.
ಅರಂಬೂರು ಭಾರಧ್ವಾಜಾಶ್ರಮದ ವೆಂಕಟೇಶ ಶಾಸ್ತ್ರೀಯವರ ನೇತೃತ್ವದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಅರ್ಚಕ ವೃಂದದವರು ಸಹಕರಿಸಿದರು.

ಈ ಸಂದರ್ಭದಲ್ಲಿ ಮಹಿಳೆಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಯಾಗಿ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ನೂರಾರು ಮಂದಿ ಮಹಿಳೆಯರು ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ,ಸೇವಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಭಜನಾ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.