ಉಬರಡ್ಕ ಶ್ರೀ ನಂದಿನಿ ಮಹಿಳಾ ಮಂಡಲ ವತಿಯಿಂದ ವರಮಹಾಲಕ್ಷ್ಮೀ ಪೂಜೆ

0

ಉಬರಡ್ಕ ಶ್ರೀ ನಂದಿನಿ ಮಹಿಳಾ ಮಂಡಲದ ವತಿಯಿಂದ ಉಬರಡ್ಕ ಶ್ರೀ ನರಸಿಂಹ ಶಾಸ್ತಾವು ದೇವಾಲಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆಯು ಆ.25 ರಂದು ನಡೆಯಿತು.

ದೇವಸ್ಥಾನದ ಪ್ರಧಾನ ಅರ್ಚಕ ಮಧ್ವರಾಜ್ ರವರ ನೇತೃತ್ವದಲ್ಲಿ ಪೂಜೆಯು ನಡೆಯಿತು. ಮಧ್ಯಾಹ್ನ ಮಹಾಪೂಜೆ ಯಾಗಿ ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು.

ನೂರಾರು ಮಂದಿ ಮಹಿಳೆಯರು ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ನಳಿನಾಕ್ಷಿ ವಸಂತ ಕೈಪೆ, ಕಾರ್ಯದರ್ಶಿ ಪೂರ್ಣಿಮಾ ಪಾನತ್ತಿಲ, ಮಹಿಳಾಮಂಡಲದ ಪದಾಧಿಕಾರಿಗಳು, ಸದಸ್ಯರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ,ಸೇವಾ ಸಮಿತಿ, ಜೀರ್ಣೋದ್ಧಾರ ಸಮಿತಿ, ಸದಸ್ಯರು ಉಪಸ್ಥಿತರಿದ್ದರು.