ಮರಕತ : ಶ್ರೀ ವರಮಹಾಲಕ್ಷ್ಮಿ ಪೂಜೆ

0


ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದುರ್ಗಾಪರಮೇಶ್ವರಿ ಉಪಾಸನ ಸಮಿತಿಯವರಿಂದ ೧೫ನೇ ವರ್ಷದ ವರಮಹಾಲಕ್ಷ್ಮಿ ಪೂಜೆಯು ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ದುರ್ಗಾ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನಡೆಯಿತು. ನಂತರ ಪಕ್ಕದಲ್ಲಿ ಹರಿಯುವ ದರ್ಪಣ ತೀರ್ಥದಲ್ಲಿ ಸಾಮೂಹಿಕವಾಗಿ ಬಾಗಿನ ಅರ್ಪಿಸಲಾಯಿತು. ಊರಿನವರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.