ಅರಂತೋಡು-ತೊಡಿಕಾನ ಗ್ರಾಮ ಅಭಿವೃದ್ಧಿಗೆ ಅಹವಾಲು ಸಲ್ಲಿಕೆ
ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹಾಗೂ ಸದಸ್ಯರು ಮತ್ತು ಆರಂತೋಡು ಸಹಕಾರಿ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ನಿರ್ದೇಶಕರುಗಳ ನಿಯೋಗ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಕುಮಾರಿ ಭಾಗೀರಥಿ ಮುರುಳ್ಯರನ್ನು ಸುಳ್ಯ ತಾಲೂಕು ಪಂಚಾಯತ್ ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿ, ಆರಂತೋಡು – ತೊಡಿಕಾನ ಅವಳಿ ಗ್ರಾಮಗಳ ವ್ಯಾಪ್ತಿಯ ವಿವಿಧ ಕಾಮಗಾರಿ ಗಳನ್ನು ಆದ್ಯತೆ ಮೇಲೆ ಕ್ರಮ ಕೈ ಗೊಳ್ಳಲು ಮನವಿ ಸಲ್ಲಿಸಲಾಯಿತು.
ನಿಯೋಗದಲ್ಲಿ ಆರಂತೋಡು ಅಧ್ಯಕ್ಷರಾದ ಕೇಶವ ಅಡ್ತಲೆ ಉಪಾಧ್ಯಕ್ಷರಾದ ಶ್ರೀಮತಿ ಭವಾನಿ ಚಿಟ್ಟಾನೂರ್,ಸಹಕಾರಿ ಸಂಘದ ಅಧ್ಯಕ್ಷರಾದ ಸಂತೋಷ ಕುತ್ತಮೊಟ್ಟೆ, ಉಪಾಧ್ಯಕ್ಷರಾದ ದಯಾನಂದ ಕುರುಂಜಿ, ಪಂಚಾಯತ್ ಮಾಜಿ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹರಿಣಿ ದೇರಾಜೆ, ಮಾಜಿ ಉಪಾಧ್ಯಕ್ಷರಾದ ಕು. ಶ್ವೇತಾ ಅರಮನೆಗಯ, ಪಂಚಾಯತ್ ಸದಸ್ಯರಾದ ವೆಂಕಟ್ರಮಣ ಪೆತ್ತಾಜೆ, ಪುಷ್ಪದರ ಕೊಡಂಕೇರಿ, ಶ್ರೀಮತಿ ಮಾಲಿನಿ ವಿನೋದ್ ಉಳುವಾರ್, ಶ್ರೀಮತಿ ಸುಜಯ ಲೋಹಿತ್,ಸಹಕಾರಿ ಸಂಘದ ನಿರ್ದೇಶಕರುಗಳಾದ ಚಂದ್ರಶೇಖರ ಚೋಡಿಪಣೆ, ಕುಸುಮಾಧರ ಅಡ್ಕಬಳೆ, ಸಂತೋಷ ಚಿಟ್ಟಾನೂರ್, ಶಾಸಕರ ಜೊತೆ ಬಿ. ಜೆ. ಪಿ. ಮಂಡಲ ಸಮಿತಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಪ್ರದಾನ ಕಾರ್ಯದರ್ಶಿ ಗಳಾದ ಸುಬೋದ್ ಶೆಟ್ಟಿ ಮೇನಾಲ, ಐವರ್ನಾಡು ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಎನ್ ಮನ್ಮಥ, ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಉಪಸ್ಥಿತರಿದ್ದರು.