ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಆಧಾರ್ ಅಥೆಂಟಿಕೇಷನ್ ಶಿಬಿರ

0

ಸೈಂಟ್ ಜೋಸೆಫ್ ಶಾಲೆಯಲ್ಲಿ ನಡೆದ ಶಿಬಿರದಲ್ಲಿ ನೂರಾರು ವಿದ್ಯಾರ್ಥಿಗಳು ಬಾಗಿ

ಕರ್ನಾಟಕ ಸರಕಾರ‌ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ನೀಡಲ್ಪಡುವ ವಿದ್ಯಾರ್ಥಿ ವೇತನಕ್ಕೆ ಆಧಾರ್ ಅಥೆಂಟಿಕೇಶನ್ ಶಿಬಿರ ಆಗಸ್ಟ್ 29ರಂದು ಸುಳ್ಯ ಸೈಂಟ್ ಜೋಸೆಫ್ ಶಾಲಾ ಸಭಾಂಗಣದಲ್ಲಿ ನಡೆಯಿತು.

ಈ ಯೋಜನೆಯನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ತಮ್ಮ ಆಧಾರ್ ಕಾರ್ಡಿನೊಂದಿಗೆ ಆನ್ಲೈನ್ ಕೇಂದ್ರಕ್ಕೆ ಬಂದು ತಂಬು ನೀಡಿ ಅರ್ಜಿಗಳನ್ನು ಸಲ್ಲಿಸಬೇಕೆಂದು ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಹಿನ್ನಲೆಯಲ್ಲಿ ಕಳೆದ ಒಂದು ವಾರಗಳಿಂದ ಸುಳ್ಯ ತಾಲೂಕಿನ ವಿವಿಧ ಶಾಲಾ ಕಾಲೇಜುಗಳಲ್ಲಿ ಈ ಶಿಬಿರವನ್ನು ಆಯೋಜಿಸಲಾಗಿದ್ದು ನೂರಾರು ಮಂದಿ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.ಕಳೆದ ಸಾಲಿನಲ್ಲಿ ಅರ್ಜಿಗಳನ್ನು ನೀಡಿ ಸಂದೇಶ ಬಂದಿರುವ ವಿದ್ಯಾರ್ಥಿಗಳಿಗೆ ಇದರ ಸದುಪಯೋಗವನ್ನು ಪಡೆದುಕೊಳ್ಳುವ ಅವಕಾಶ ನೀಡಲಾಗಿತ್ತು.

ಇಂದಿನ ಶಿಬಿರದಲ್ಲಿ ನೊಂದಣಿ ಕಾರ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸುಳ್ಯ ಕಚೇರಿಯ ಸಿಬ್ಬಂದಿಗಳಾದ ಕಮಾಲ್, ಹಾಗೂ ವಿಷ್ಣು,ಸಾಮಾನ್ಯ ನಾಗರಿಕ ಸೇವಾ ಕೇಂದ್ರದ ಮುಖಂಡರುಗಳಾದ ಉಮ್ಮರ್ ಸೀಗೆಯಡಿ,ಚಂದ್ರಜಿತ್, ಮುಕೇಶ್ ಪಡ್ಪು, ವಿಶ್ವಾಸ್, ಮನ್ವಿತ್ ಮಂಡೆಕೋಲು, ನವೀನ್ ಪ್ರಬು,
ಸಹದ್ ಪೆರಾಜೆ,ಅರ್ಷದ್ ಪೆರಾಜೆ ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.
ತಾಲೂಕಿನ ವಿವಿಧ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳೊಂದಿಗೆ ಉಪಸ್ಥಿತರಿದ್ದರು.