ಸೆಪ್ಟೆಂಬರ್ ಮೊದಲ ವಾರದಿಂದ 14 ಶನಿವಾರ ಪೂರ್ಣ ತರಗತಿ

0

ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಸಂದರ್ಭದಲ್ಲಿ ನೀಡಲಾಗಿದ್ದ ರಜೆಯನ್ನು ಸರಿದೂಗಿಸಲು ಸೆಪ್ಟೆಂಬರ್ ಮೊದಲ ವಾರದಿಂದ ಆರಂಭಿಸಿ ಒಟ್ಟು 14 ಶನಿವಾರಗಳಂದು ಇಡೀ ದಿನ ಶಾಲೆ ನಡೆಸುವಂತೆ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಶಾಲೆಗಳಿಗೆ ಸೂಚನೆ ನೀಡಿದ್ದಾರೆ.

ಜುಲೈನಲ್ಲಿ ಸುರಿದ ಅತಿ ಹೆಚ್ಚು ಮಳೆಯಿಂದಾಗಿ ಜಿಲ್ಲೆಯ ಶಾಲೆಗಳಿಗೆ ಜಿಲ್ಲಾಧಿಕಾರಿಯ ನಿರ್ದೇಶನದಂತೆ ಏಳು ದಿನ ರಜೆ ನೀಡಲಾಗಿತ್ತು.