ಹಾಕಿ ದಂತ ಕಥೆ ಮೇಜರ್ ಧ್ಯಾನ್ ಚಂದ್ ಅವರ ಹುಟ್ಟುಹಬ್ಬವನ್ನು ರಾಷ್ಟ್ರೀಯ ಕ್ರೀಡಾ ದಿನವಾಗಿ ಆಚರಿಸುವ ಸಲುವಾಗಿ ಜ್ಞಾನದೀಪ ವಿದ್ಯಾ ಸಂಸ್ಥೆ ಎಲಿಮಲೆ ವಿದ್ಯಾ ಸಂಸ್ಥೆಯಲ್ಲಿ ಯೋಗ ಗುರು ಸಂತೋಷ್ ಮುಂಡೋಕಜೆ ಇವರು ಕ್ರೀಡೆ ಹಾಗೂ ಯೋಗದ ಉಪಯೋಗಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಆರೋಗ್ಯಕ್ಕೆ ಅತ್ಯಂತ ಅವಶ್ಯಕವಾಗಿರುವ ಯೋಗಗಳನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಹೇಳಿಕೊಡಲಾಯಿತು. ಹಾಗೂ ಈ ದಿನ ವಿದ್ಯಾರ್ಥಿಗಳಿಗೆ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ಗದಾಧರ ಬಾಳುಗೋಡು ಹಾಗೂ ಇತರ ಶಿಕ್ಷಕರು ಉಪಸ್ಥಿತರಿದ್ದರು.