ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

0

ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಕಲ್ಲುಗುಂಡಿಯಲ್ಲಿ ಸಂಭ್ರಮಾಚರಣೆ

ಮನೆಯ ಯಜಮಾನಿಗೆ 2,000 ರೂ.ಸಹಾಯಧನ ನೀಡುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ದೊರಕಿದ ಹಿನ್ನೆಲೆಯಲ್ಲಿ ಸಂಪಾಜೆ ವಲಯ ಕಾಂಗ್ರೆಸ್ ವತಿಯಿಂದ ಕಲ್ಲುಗುಂಡಿಯಲ್ಲಿ ಸಂಭ್ರಮಾಚರಣೆಯನ್ನು ನಡೆಸಲಾಯಿತು.

ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಕುಂಞ ಗೂನಡ್ಕ, ಕೆ.ಪಿ.ಸಿ.ಸಿ.ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿ ಪಿ.ಕೆ.ಅಬೂಸಾಲಿ, ಕೆ.ಪಿ.ಸಿ.ಸಿ.ವಕ್ತಾರ ಶೌವಾದ್ ಗೂನಡ್ಕ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಜ್ಞಾನಶೀಲನ್ ನೆಲ್ಲಿಕುಮೇರಿ ಅವರು ಮಾತನಾಡಿ “ನುಡಿದಂತೆ ನಡೆದ” ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ, ಸಂಪಾಜೆ ವಲಯ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ.ಎಂ.ಅಶ್ರಫ್, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಮಾಜಿ ಸದಸ್ಯರುಗಳಾದ ಎ.ಕೆ.ಹನೀಫ್, ಬೆಂಜಮೀನ್ ಡಿ’ಸೋಜಾ, ದಮಯಂತಿ ನಾಯ್ಕ್, ಭಾರತಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕೋಶಾಧಿಕಾರಿ ತಾಜ್ ಮಹಮ್ಮದ್,ಸುಳ್ಯ ಬ್ಲಾಕ್ ಕಾಂಗ್ರೇಸ್ ಸಮಿತಿ ಸದಸ್ಯ ತಾಜುದ್ದೀನ್ ಆರಂತೋಡು,ಪ್ರಮುಖ ಕಾರ್ಯಕರ್ತರಾದ ವಸಂತ ಗೌಡ ಪೆಲ್ತಡ್ಕ, ಸೆಬಾಸ್ಟಿಯನ್, ಎ.ಎ.ಮಹಮ್ಮದ್ ಕುಂಞ (ಉಪ್ಪಿ), ಎಸ್.ಕೆ.ಅಬ್ದುಲ್ ರಜಾಕ್, ಕ್ಯಾರೊಲಿನ್ ಕ್ರಾಸ್ತಾ, ಮಹಮ್ಮದ್ ಹನೀಫ್, ಬಿ.ಎಸ್.ಹನೀಫ್ ಸೇರಿದಂತೆ ಮತ್ತೀತರರು ಉಪಸ್ಥಿತರಿದ್ದರು. ಸಂಪಾಜೆ ವಲಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಟಿ.ಐ.ಲೂಕಾಸ್ ಅವರು ಸ್ವಾಗತಿಸಿ, ವಂದಿಸಿದರು.