ಕ್ಲಸ್ಟರ್ ಪ್ರತಿಭಾ ಕಾರಂಜಿ : ಮುಡ್ನೂರು ಮರ್ಕಂಜ ಶಾಲೆಗೆ ಸಮಗ್ರ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡ್ನೂರು ಮರ್ಕಂಜ ಶಾಲೆಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಹಿರಿಯರ ವಿಭಾಗ ಸಮಗ್ರ ಪ್ರಥಮ ಬಹುಮಾನ ಮತ್ತು ಕಿರಿಯರ ವಿಭಾಗ ಸಮಗ್ರ ದ್ವಿತೀಯ ಬಹುಮಾನ ಪಡೆದುಕೊಂಡಿದೆ.

ಆ.30ರಂದು ತೊಡಿಕನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ಸರ್ಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಸುತ್ತೋಲೆಯಂತೆ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾಕಾರಂಜಿಯಲ್ಲಿ ಹಿರಿಯರ ಮತ್ತು ಕಿರಿಯರ ವಿಭಾಗದಲ್ಲಿ ಸಮಗ್ರ ಪ್ರಥಮ ಮತ್ತು ಸಮಗ್ರ ದ್ವಿತೀಯ ಬಹುಮಾನ ಪಡೆದುಕೊಂಡಿದೆ.