ಮರ್ಕಂಜ ಗ್ರಾ. ಪಂ. : ರಾಜ್ಯ ಸರಕಾರದ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನ ಕಾರ್ಯಕ್ರಮ

0

ಕರ್ನಾಟಕ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮ ರಾಜ್ಯಾದ್ಯಂತ ಅನುಷ್ಟಾನಗೊಂಡಿತು‌ ಈ ಹಿನ್ನಲೆಯಲ್ಲಿ ಸರಕಾರದ ಸುತ್ತೋಲೆಯಂತೆ ಮರ್ಕಂಜ ಪ್ರಾ.ಕೃ.ಪ.ಸ.ಸಂಘದ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಎಲ್ಇಡಿ ಪ್ರೋಜೆಕ್ಟರ್ ಮುಖಾಂತರ ನೇರವಾಗಿ ವೀಕ್ಷಿಸುವ ವ್ಯವಸ್ಥೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಹೊಸೊಳಿಕೆ ಪ್ರಾಸ್ತಾವಿಕ ವಾಗಿ ಮಾತನಾಡಿ ಸ್ವಾಗತಿಸಿದರು. ‌ ಉಪಾಧ್ಯಕ್ಷೆ ಸಂಧ್ಯಾ ಸೇವಾಜೆ ಪಾರೆಮಜಲು, ಪಂಚಾಯತ್ ಸದಸ್ಯರು, ನೋಡೆಲ್ ಅಧಿಕಾರಿಯಾದ ತೋಟಗಾರಿಕಾ ಇಲಾಖೆಯ ಸಹಾಯಕ ತೋಟಗಾರಿಕಾಧಿಕಾರಿ ವಿಜೇತ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


ಸಂಜೀವಿನಿ ಸಂಘದ ಅಧ್ಯಕ್ಷರು ಸದಸ್ಯರು ಸದಸ್ಯರು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸ್ಥಳೀಯ ಸಂಘಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು. ಕಾರ್ಯದರ್ಶಿ ಪದ್ಮಾವತಿ ವಂದಿಸಿದರು.