ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೌಜನ್ಯ ಕೊಲೆ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಸಾಮೂಹಿಕ ಪ್ರಾರ್ಥನೆ

0

ವಿಶ್ವ ಹಿಂದೂ ಪರಿಷತ್ ಬಜರಂಗದಳ ವಾಲ್ಮೀಕಿ ಶಾಖೆ ಬೆಳ್ಳಾರೆ ವತಿಯಿಂದ
ಸೌಜನ್ಯನ ಕೊಲೆ ಪ್ರಕರಣ ಆದಷ್ಟು ಬೇಗ ಇತ್ಯರ್ಥವಾಗಿ ನೈಜ ಆರೋಪಿಗಳಿಗೆ ಶಿಕ್ಷೆಯಾಗುವಂತೆ ಸಾಮೂಹಿಕ ಪ್ರಾರ್ಥನೆ ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆ, ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ರೈ, ಸಚಿನ್ ಪೂವಾಜೆ, ಸುಳ್ಯ ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ತೀರ್ಥ ಕುಮಾರ್ ಕುಂಚಡ್ಕ, ಸುಳ್ಯ ಬಜರಂಗದಳ ಪ್ರಖಂಡ ಸಂಯೋಜಕ್ ಎ.ಟಿ.ಕುಸುಮಾಧರ, ಸುಳ್ಯ ಪ್ರಖಂಡ ಸಂಯೋಜಕ್, ಹರಿಪ್ರಸಾದ್, ಸಂದೀಪ್ ವಳಲಂಬೆ , ಸನತ್ ಚೊಕ್ಕಾಡಿ, ಗಂಗಾಧರ ರೈ ಪುಡ್ಕಜೆ ಮತ್ತು ಪ್ರಮುಖರು ಉಪಸ್ಥಿತರಿದ್ದರು.