ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆ, ಉಜಿರೆಯಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪಂಜ ಇಲ್ಲಿಯ ಎಂಟನೇ ತರಗತಿ ವಿದ್ಯಾರ್ಥಿ ಅರ್ಚನ್ ಕೆ. ಐದನೇ ಸ್ಥಾನ ಪಡೆದು ಉಡುಪಿ ಜಿಲ್ಲೆಯ ಹೆಬ್ರಿಯಲ್ಲಿ ನಡೆಯುವ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.