ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ರಾಜಣ್ಣ ಅವರು ಸೆ.2 ರಂದು ಅಧಿಕಾರ ವಹಿಸಿಕೊಂಡರು.
ಸುಳ್ಯ ತಾಲೂಕು ಪಂಚಾಯತ್ ನಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅವರು ಪ್ರಭಾರ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಲಸ ನಿರ್ವಹಿಸಲಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಅವರನ್ನು ದೇವರ ಪ್ರಸಾದ ನೀಡಿ ಬರಮಾಡಿಕೊಂಡರು. ಸಮಿತಿ ಸದಸ್ಯೆ ಶೋಬಾ ಗಿರಿಧರ್ ಉಪಸ್ಥಿತರಿದ್ದರು.