ಸಾಂಸ್ಕೃತಿಕ ಜನಪದ ಕಲೆಯ ತವರು ಭೂಮಿ ಭಾರತ,
ಜನಪದ ಕಲೆ ಜೀವಂತವಾಗಿ ಉಳಿಯಬೇಕಾದರೆ ಸರಕಾರದ ಮಟ್ಟದಲ್ಲಿ ಪ್ರೋತ್ಸಾಹ ಅನಿವಾರ್ಯ : ಎಸ್.ಅಂಗಾರ
ಸಾಂಸ್ಕೃತಿಕ ಇತಿಹಾಸ ಹೊಂದಿದ ತವರು ಭೂಮಿ ಭಾರತ. ಜನಪದ ಸೊಗಡು ಭಾರತ ಮಾತೆಯ ನಾಡಿನಲ್ಲಿ ಹಾಸು ಹೊಕ್ಕಾಗಿದೆ. ಜನಪದ ಸಂಸ್ಕೃತಿ ಜೀವಂತವಾಗಿ ಉಳಿಯಬೇಕಾದರೆ ಸರಕಾರವು ಯುವಜನ ಸಂಯುಕ್ತ ಮಂಡಳಿಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಮಾಜಿ ಸಚಿವ ಎಸ್.ಅಂಗಾರ ರವರು ಹೇಳಿದರು.
ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಆಶ್ರಯದಲ್ಲಿ ಚೊಕ್ಕಾಡಿ ಪ್ರೌಢಶಾಲೆ ಕುಕ್ಕುಜಡ್ಕದ ಸುವರ್ಣ ರಂಗಮಂದಿರದಲ್ಲಿ ಸೆ.2 ರಂದು ನಡೆದ ಜನಪದ ಸಾಂಸ್ಕೃತಿಕ ವೈಭವ ನಲಿಪು – 2023 ರ ಜನಪದ ಪ್ರಕಾರಗಳ ಮುಕ್ತ ನೃತ್ಯ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕಿನಲ್ಲಿ ರಾಜ್ಯ ಮಟ್ಟದ ಯುವಜನ ಮೇಳ ಹಮ್ಮಿಕೊಳ್ಳುವ ಮೂಲಕ ಸರಕಾರದ ಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಅಮರಮುಡ್ನೂರು ಅಮರಪಡ್ನೂರು ಅವಳಿ ಗ್ರಾಮಕ್ಕೆ ಬಹಳ ಇತಿಹಾಸವಿದೆ.
ಓರ್ವ ಖ್ಯಾತ ಕವಿಯನ್ನು ಜನಪದ ಕ್ಷೇತ್ರಕ್ಕೆ ಕೊಡುಗೆ ನೀಡಿರುವುದು ಚೊಕ್ಕಾಡಿ ಎಂಬ ಗ್ರಾಮೀಣ ಪ್ರದೇಶದಿಂದ ಎಂಬುದನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಶಾಸಕಿ ಕು.ಭಾಗೀರಥಿ ಮುರುಳ್ಯ ರವರು ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಅಮರಮುಡ್ನೂರು ಪಂಚಾಯತ್ ಅಧ್ಯಕ್ಷೆ ಜಾನಕಿ ಕಂದಡ್ಕ,
ಬೆಳ್ಳಾರೆ ಕಾಮಧೇನು ಗ್ರೂಪ್ಸ್ ಮಾಲಕ ಮಾಧವ ಗೌಡ ಬೆಳ್ಳಾರೆ, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ರಾಜ್ಯ ಯುವಜನ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಚೊಕ್ಕಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಕರ್ಮಜೆ,
ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಸಂಚಾಲಕ ರಾಧಾಕೃಷ್ಣ ಬೊಳ್ಳೂರು, ಪೈಲಾರು ಸ.ಹಿ.ಪ್ರಾ.ಶಾಲೆಯ ಶತಮಾನೋತ್ಸವ ಸಮಿತಿ ಅಧ್ಯಕ್ಷ ಜಯಶಿವ ಮಡಪ್ಪಾಡಿ, ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಶಿವಪ್ರಕಾಶ್ ಕಡಪಳ, ಚೊಕ್ಕಾಡಿ ಗರುಡ ಯುವಕ ಮಂಡಲದ ಅಧ್ಯಕ್ಷ ಮನೋಜ್ ಪಡ್ಪು, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ತೇಜಸ್ವಿ ಕಡಪಳ ಉಪಸ್ಥಿತರಿದ್ದರು.
ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ತೇಜಸ್ವಿ ಕಡಪಳ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸಂಜಯ್ ನೆಟ್ಟಾರು ವಂದಿಸಿದರು. ಪೈಲಾರು ಮಿತ್ರ ವೃಂದದ ಅಧ್ಯಕ್ಷ ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು. ಯುವಜನ ಸಂಯುಕ್ತ ಮಂಡಳಿಯ ಗೌರವ ಸಲಹೆಗಾರರು, ಪದಾಧಿಕಾರಿಗಳು ಹಾಗೂ ನಿರ್ದೇಶಕರು ಸಹಕರಿಸಿದರು.