ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಸುಳ್ಯ ಹೋಬಳಿಯ ಕಂದಾಯ ನಿರೀಕ್ಷಕ ಅವಿನ್ ರವರು ಇಂದು ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಪುಷ್ಪಲತಾ ರವರಿಂದ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕಿಶೋರ್ ಕುಮಾರ್ ಹಾಗೂ ಸಮಿತಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.