ಸುಳ್ಯ ಯುವಜನ ಸಂಯುಕ್ತ ಮಂಡಳಿಯ ವತಿಯಿಂದ ಕುಕ್ಕುಜಡ್ಕ ಪ್ರೌಢಶಾಲೆಯ ಸುವರ್ಣ ರಂಗ ಮಂದಿರದಲ್ಲಿ ನಡೆದ ನಲಿಪು ಜನಪದ ಮುಕ್ತ ನೃತ್ಯ ಸ್ಪರ್ಧೆಯ ಸಂದರ್ಭದಲ್ಲಿ 2022-23 ನೇ ಸಾಲಿನ ಸುಳ್ಯ ತಾಲೂಕಿನ ಅತ್ಯುತ್ತಮ ಯುವಕ- ಯುವತಿ ಮಂಡಲಕ್ಕೆ ಪ್ರಶಸ್ತಿ ಪ್ರದಾನ ಸಮಾರಂಭವು ಸೆ.2 ರಂದು ನಡೆಯಿತು.
ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷ ತೇಜಸ್ವಿ ಕಡಪಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಯುವಜನ ಸಂಯುಕ್ತ ಮಂಡಳಿಯಪೂರ್ವಾಧ್ಯಕ್ಷ ಎನ್.ಜಯಪ್ರಕಾಶ್ ರೈ, ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಜೇಸಿಐ ವಲಯ 15 ಪೂರ್ವ ವಲಯಾಧಿಕಾರಿ ಮಿಥುನ್ ಶೆಣೈ ಬೆಳ್ಳಾರೆ, ಯು.ಸಂ.ಮಂಡಳಿ ಪೂರ್ವಾಧ್ಯಕ್ಷ ದಯಾನಂದ ಕೇರ್ಪಳ, ಪ್ರಧಾನ ಕಾರ್ಯದರ್ಶಿ ಸಂಜಯ್ ನೆಟ್ಟಾರು, ಕೋಶಾಧಿಕಾರಿ ಮುರಳಿ ನಳಿಯಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 2022-23 ನೇ ಸಾಲಿನ ತಾಲೂಕಿನ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪ್ರತಾಪ ಯುವಕ ಮಂಡಲ ಅಜ್ಜಾವರ ಹಾಗೂ ಮಯೂರಿ ಯುವತಿ ಮಂಡಲ ಚೊಕ್ಕಾಡಿಯು ಪ್ರಶಸ್ತಿಗೆ ಭಾಜನವಾಯಿತು.
ಗಮನಾರ್ಹ ಸಾಧನೆಗೈದ
ಚೈತ್ರ ಯುವತಿ ಮಂಡಲ ಅಜ್ಜಾವರ, ಶ್ರೀ ಶಾಸ್ತಾವು ಯುವಕಮಂಡಲ ರೆಂಜಾಳ, ಸ್ಪಂದನ ಗೆಳೆಯರ ಬಳಗ ಅಡ್ತಲೆ, ಯಶಸ್ವಿ ಯುವಕ ಮಂಡಲ ಕಲ್ಲುಗುಂಡಿ ತಂಡಗಳಿಗೆ ಪ್ರಶಸ್ತಿ ನೀಡಿ ಅಭಿನಂದಿಸಲಾಯಿತು. ಅತಿಥಿಗಳು ಯುವಕ- ಯುವತಿ ಮಂಡಲಗಳಿಗೆ ಪ್ರಶಸ್ತಿ ಪ್ರದಾನವನ್ನು ನೆರವೇರಿಸಿದರು. ಯುವಜನ ಸಂಯುಕ್ತ ಮಂಡಳಿಯ ಪೂರ್ವಾಧ್ಯಕ್ಷ ಶಿವಪ್ರಕಾಶ್ ಅಡ್ಡನಪಾರೆ ಯವರನ್ನು ಸನ್ಮಾನಿಸಲಾಯಿತು. ಯು.ಸಂ.ಕೋಶಾಧಿಕಾರಿ ಮುರಳಿ ನಳಿಯಾರು ಸ್ವಾಗತಿಸಿದರು. ಉಪಾಧ್ಯಕ್ಷ ವಿಜಯಕುಮಾರ್ ಉಬರಡ್ಕ ರವರು ವಂದಿಸಿದರು. ಶಶಿಕಾಂತ್ ಮಿತ್ತೂರು ಕಾರ್ಯಕ್ರಮ ನಿರೂಪಿಸಿದರು.