ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

0

ಐವರ್ನಾಡು ಗ್ರಾಮ ಪಂಚಾಯತ್ ವತಿಯಿಂದ ನಡೆಯುವ ಮಾಸಿಕ ಸ್ವಚ್ಛತಾ ಕಾರ್ಯಕ್ರಮವು ಐವರ್ನಾಡು ಗ್ರಾಮ ಪಂಚಾಯತ್ ವಠಾರ ಹಾಗೂ ಮುಖ್ಯ ರಸ್ತೆ ಯ ಬದಿಯಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ವಠಾರದಿಂದ ಮರ್ವತ್ತಡ್ಕ ದ ವರೆಗೆ ಸೆ.3 ರಂದು ನಡೆಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಐವರ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷರು,ಸದಸ್ಯರು ,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ ಹಾಗೂ ಪಂಚಾಯತ್ ಸಿಬ್ಬಂದಿಗಳು, ಹಾಗೂ ಊರಿನ ಪ್ರಮುಖರು ಭಾಗವಹಿಸಿದ್ದರು.