ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶನದಂತೆ ಜಾಲ್ಸೂರು ಗ್ರಾಮ ಪಂಚಾಯತಿಯ 2022-23ನೇ ಸಾಲಿನ ಜಮಾಬಂಧಿಯು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆ.30ರಂದು ಜರುಗಿತು.
ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಅವರು ಜಮಾಬಂಧಿ ನೋಡೆಲ್ ಅಧಿಕಾರಿಯಾಗಿ ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ ಅವರು ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಗ್ರಾಮ ಪಂಚಾಯತಿ ಜಮಾಖರ್ಚಿನ ಬಗ್ಗೆ ಲೆಕ್ಕಪತ್ರ ಪರಿಶೀಲನೆ ನಡೆಸಿತು.
ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಅರ್ಭಡ್ಕ, ಪ್ರಭಾರ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸುಬ್ಬಯ್ಯ ಕೆ.ಪಿ., ಕಾರ್ಯದರ್ಶಿ ಸುಂದರ ಮುಪ್ಪೇರ್ಯ, ಸೇರಿದಂತೆ ಗ್ರಾಮ ಪಂಚಾಯತಿ ಸದಸ್ಯರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.