ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

0

ಶಿಕ್ಷಕರ ದಿನಾಚರಣೆ ಸಂದರ್ಭ ದಕ್ಷಿಣ ಕನ್ನಡ‌ ಜಿಲ್ಲಾಡಳಿತದಿಂದ ಕೊಡಮಾಡುವ ಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಗೆ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಬೊಳುಬೈಲು ಕಿರಿಯ ಪ್ರಾಥಮಿಕ ಶಾಲೆಯ ಶ್ರೀಮತಿ ರಾಧಾಮ್ಮ, ಪ್ರಾಥಮಿಕ ಶಾಲಾ ವಿಭಾಗದಿಂದ ಗೂನಡ್ಕ ಶ್ರೀ ಶಾರದಾ ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹನುಮಂತಪ್ಪ ಜಿ ಹಾಗೂ ಪ್ರೌಢಶಾಲಾ ವಿಭಾಗದಿಂದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲಾ ಶಿಕ್ಷಕ ಉದಯಕುಮಾರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.