ರಾಜ್ಯಾದ್ಯಂತ ಕನ್ನಡ ನಾಡು ನುಡಿ ಕಾರ್ಯಕ್ರಮ ಮಾಡುವ ಪುಟ್ಟ ಹೆಜ್ಜೆ: ಡಾ.ಬೀಜದಕಟ್ಟೆ
ಗುಲ್ಬರ್ಗದ ಸೇಡಂನ ಕರ್ನಾಟಕ ಭವನದಲ್ಲಿ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಹಾಗೂ ಸೇಡಂ ನ ಆಶ್ರಯ ಮತ್ತು ಗ್ರಾಮಿಣ ಅಭಿವೃದ್ಧಿ ಸಂಸ್ಥೆ,ಸ್ವಾಮಿ ವಿವೇಕಾನಂದ ಕಲಾ ಪದವಿ ಮತ್ತು ಸಮಾಜಕಾರ್ಯ ಸ್ನಾತಕೋತ್ತರ ಮಹಾವಿದ್ಯಾಲಯ ಸೇಡಂ ಇದರ ಜಂಟಿ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಒಂದು ದಿನದ ವಿಚಾರ ಸಂಕಿರಣ ಕಾರ್ಯಕ್ರಮ ಸೆ.2 ರಂದು ಸೇಡಂ ನ ಸುವರ್ಣ ಕರ್ನಾಟಕ ಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿ ಸಜ್ಜನ ಪ್ರತಿಷ್ಠಾನ ಅಧ್ಯಕ್ಷ ಡಾ. ಉಮ್ಮರ್ ಬೀಜದಕಟ್ಟೆ ಇವರಿಂದ ವ್ಯಕ್ತಿತ್ವ ವಿಕಸನ ಎಂಬ (Personality Development) ವಿಷಯದ ಬಗ್ಗೆ ಉಪನ್ಯಾಸ ನೀಡಿ
ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ) ಯು ರಾಜ್ಯದಾದ್ಯಂತ ಉಚಿತ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ,ಕನ್ನಡ ನಾಡು ನುಡಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡುತ್ತ ಬಂದಿದ್ದೇವೆ ಮುಂದೆ ಕರ್ನಾಟಕ ರಾಜ್ಯಾದ್ಯಂತ ಕನ್ನಡ ನಾಡು ನುಡಿ ಕಾರ್ಯಕ್ರಮ ಮಾಡುವ ಪುಟ್ಟ ಹೆಜ್ಜೆಯನ್ನು ಇಟ್ಟಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜಕಾರ್ಯ ಅಧ್ಯಯನ ವಿಭಾಗ ಗುಲ್ಬರ್ಗ ವಿಶ್ವವಿದ್ಯಾಲಯದ ಉಪನ್ಯಾಸಕರಾದ ಡಾ. ರಾಜಶೇಖರ್. ಎಲ್ ಕಟ್ಟಿಮನಿ, ಪುರಸಭೆ ಸೇಡಂನ ಮುಖ್ಯ ಅಧಿಕಾರಿಗಳಾದ ಶ್ರೀ ಬಿ ಪ್ರಹ್ಲಾದ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಬಸವರಾಜ ಎಮ್ ಕೊನೇರಿ, ಆಶ್ರಯ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ(ನೋಂ) ಇದರ ಅಧ್ಯಕ್ಷರಾದ ಶ್ರೀ ಶಶಿಕಾಂತ ಬೇಡಸೂರ, ಆಶ್ರಯನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಸೇಡಂ ಇದರ ಕಾರ್ಯದರ್ಶಿಗಳಾದ ಶ್ರೀ ಓಂ ಪ್ರಕಾಶ ಪಾಟೀಲ ತರಹಳ್ಳಿ, ಸ್ವಾಮಿ ವಿವೇಕಾನಂದ ಕಲಾ ಪದವಿ ಮತ್ತು ಸಮಾಜಕಾರ್ಯ ಸ್ನಾತಕೋತ್ತರ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಶ್ರೀ ಸಂದೀಪ ಪ್ಯಾಟಿ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ (ನೋಂ)ಯ ನಿರ್ದೇಶಕರಾದ ಅಯ್ಯುಬ್ ಗೂನಡ್ಕ ಮತ್ತು ಮಂಜುನಾಥ ಆರ್ ಹಿರಿಯೂರು ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ 300 ಕ್ಕೂ ಹೆಚ್ಚು ಸ್ನಾತಕೋತ್ತರ ಹಾಗೂ ಪದವಿ ವಿದ್ಯಾರ್ಥಿ ವಿದ್ಯಾಥಿನಿಯರು ಭಾಗವಹಿಸಿದರು.
ರೇವಣ್ಣ ಸಿದ್ದಪ್ಪ ಪಾಟೀಲ್ ಕಾರ್ಯಕ್ರಮ ನಿರೂಪಿಸಿದರು.