ಬೆಳ್ಳಾರೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ತಾಲೂಕು ಮಟ್ಟದ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟವು ಸೆ.04 ರಂದು ನಡೆಯಿತು.
ಬೆಳ್ಳಾರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ನಮಿತಾ ರೈ ಯವರು ದೀಪ ಬೆಳಗಿಸಿ ಕ್ರೀಡಾಕೂಟ ಉದ್ಘಾಟಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ಉದ್ಯಮಿ ಜಿ.ಕೃಷ್ಣಪ್ಪ ರಾಮಕುಂಜ, ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಿ.ಕೆ.ಮಾಧವ, ಗ್ರಾಮ ಪಂಚಾಯತ್ ಸದಸ್ಯ ಅನಿಲ್ ರೈ ಚಾವಡಿಬಾಗಿಲು, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಗಣೇಶ್, ಉಪಾಧ್ಯಕ್ಷ ಯೋಗೀಶ್ ಚಿದ್ಗಲ್, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಅಧ್ಯಕ್ಷ ಧನಂಜಯ, ಕಾಲೇಜಿನ ಪ್ರಾಂಶುಪಾಲ ಜನಾರ್ದನ ನೆಕ್ಕಿಲ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಕ್ರೀಡಾ ಸಮಿತಿ ಗೌರವಾಧ್ಯಕ್ಷರಾದ ಎಸ್.ಎನ್ ಮನ್ಮಥ ಹಾಗೂ ರಾಜೀವಿ ಆರ್.ರೈ, ಕ್ರೀಡಾ ಸಮಿತಿ ಅಧ್ಯಕ್ಷ ಸುನಿಲ್ ರೈ ಎಂ, ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ, ಎಸ್.ಡಿ.ಎಂ.ಸಿ ಉಪಾಧ್ಯಕ್ಷ ಶ್ರೀನಾಥ ರೈ ಬಾಳಿಲ, ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪಾವತಿ ಪಿ,ಬೆಳ್ಳಾರೆ ಪೊಲಿಸ್ ಠಾಣಾ ಎಸ್.ಐ.ಸಂತೋಷ್ ಬಿ.ಪಿ, ಗ್ರಾ.ಪಂ.ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ ಪನ್ನೆ, ಸದಸ್ಯ ದಿನೇಶ್ಚಂದ್ರ ಹೆಗ್ಡೆ,ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯ.ಸ.ಅಧ್ಯಕ್ಷ ಸುರೇಶ್ ಕುಮಾರ್ ಶೆಟ್ಟಿ ಪನ್ನೆಗುತ್ತು, ಎಸ್.ಡಿ.ಎಂ.ಸಿ.ಸದಸ್ಯರಾದ ಆರೀಫ್, ಪಿ.ಎನ್.ಭಟ್, ವಸಂತ ಉಲ್ಲಾಸ್, ಮುರಳಿ ತಡಗಜೆ, ಅಬ್ದುಲ್ ಬಶೀರ್,ಸಮೂಹ ಸಂಪನ್ಮೂಲ ವ್ಯಕ್ತಿ ಅನುರಾಧಾ ಎ.ಆರ್. ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಪರಿವೀಕ್ಷಕ ಸೂಫಿ ಪೆರಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪಪ್ರಾಂಶುಪಾಲರಾದ ಉಮಾ ಕುಮಾರಿ ಸ್ವಾಗತಿಸಿ, ಶಿಕ್ಷಕ ರಾಮಚಂದ್ರ ಭಟ್ ಮತ್ತು ಪ್ರದೀಪ್ ಕುಮಾರ್ ರೈ ಪನ್ನೆ ಕಾರ್ಯಕ್ರಮ ನಿರೂಪಿಸಿದರು.
ಸಭಾಕಾರ್ಯಕ್ರಮ ನಡೆದ ಬಳಿಕ
ಸಬ್ ಇನ್ಸ್ ಪೆಕ್ಟರ್ ಸಂತೋಷ್ ಹಾಗೂ ಕೃಷ್ಷಪ್ಪ ಜಿ.ಯವರು ತೆಂಗಿನಕಾಯಿ ಒಡೆಯುವುದರ ಮುಖಾಂತರ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಸನ್ಮಾನ
ಎಸ್.ಎಸ್.ಎಲ್.ಸಿಯಲ್ಲಿ 622 ಅಂಕದೊಂದಿಗೆ ರಾಜ್ಯದಲ್ಲಿ 4 ನೇ ಸ್ಥಾನ ಪಡೆದ ದ್ವಿತಿ ಎಸ್.ಸಾರಕರೆಯವರನ್ನು ಸನ್ಮಾನಿಸಲಾಯಿತು.