ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರುಗಳಿಗೆ ಸನ್ಮಾನ

0

ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸುಬ್ರಹ್ಮಣ್ಯ ಇಲ್ಲಿ ಸೆ.5 ರಂದು ಆಚರಿಸಲಾಯಿತು. ಈ ಸಂದರ್ಭ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ 9 ಮಂದಿ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಪಳಂಗಾಯ ಸಭಾಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಸ್ಥಾಪಕ ಅಧ್ಯಕ್ಷ ರಂಗಯ್ಯ ಶೆಟ್ಟಿಗಾರ್, ಶಾಲಾ ಮುಖ್ಯ ಶಿಕ್ಷಕ ಮಾಧವ ಮೂಕಮಲೆ, ಅಶೋಕ್ ಕುಮಾರ್ ಉಪಸ್ಥಿತರಿದ್ದರು. , ಲಯನ್ಸ್ ಕ್ಲಬ್ಬಿನ ಸದಸ್ಯರುಗಳಾದ ದಿನೇಶ್ ಎಂ.ಪಿ, ಮೋಹನ್ದದಾಸ್ ರೈ, ಹಾಗೂ ಪವನ್ ಕುಮಾರ್ ಹಾಜರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ಯದರ್ಶಿ ಸತೀಶ ಕೂಜುಗೋಡು ಸ್ವಾಗತಿಸಿದರು. ಖಜಾಂಜಿ ಚಂದ್ರಶೇಖರ ಪಾನತ್ತಿಲ ಧನ್ಯವಾದ ಸಮರ್ಪಿಸಿದರು. ವಿಮಲಾ ರಂಗಯ್ಯ ಕಾರ್ಯಕ್ರಮ ನಿರೂಪಿಸಿದರು.