ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಿಶುವಿಹಾರದ ಮಕ್ಕಳಿಗೆ ಮುದ್ದುರಾಧ, ಮುದ್ದುಕೃಷ್ಣ ವೇಷ ಸ್ಪರ್ಧೆಯನ್ನು ಸೆ.6ರಂದು ಆಯೋಜಿಸಲಾಯಿತು.
ಈ ಕಾರ್ಯಕ್ರಮಕ್ಕೆ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್ ಕೆ.ವಿ ಹಾಗೂ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ. ಉಜ್ವಲ್ ಯು. ಜೆ. ಶುಭ ಹಾರೈಸಿ ದರು.
ಈ ಸಂದರ್ಭದಲ್ಲಿ ಮುದ್ದು ರಾಧಾ ಮತ್ತು ಕೃಷ್ಣ ವೇಷ ಹಾಕಿದ ಪುಟಾಣಿಗಳು ಎಲ್ಲರ ಮನ ಸೆಳೆದರು. ಭಾಗವಹಿಸಿದ ಎಲ್ಲಾ ಪುಟಾಣಿಗಳಿಗೆ ಸಮಾಧಾನಕರ ಬಹುಮಾನವನ್ನು ಕೊಟ್ಟು ಗೌರವಿಸಲಾಯಿತು.
ಈ ಕಾರ್ಯಕ್ರಮದ ಬಳಿಕ ಮನೋರಂಜನೆಗಾಗಿ ಎಲ್ಲಾ ವಿದ್ಯಾರ್ಥಿಗಳಿಗೆ, ಪೋಷಕರಿಗೆ ಹಾಗೂ ಶಿಕ್ಷಕ ಶಿಕ್ಷಕೇತರ ವರ್ಗದವರಿಗೆ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರುಕುಡಿಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಪೋಷಕ ವರ್ಗ ಮತ್ತು ಶಿಕ್ಷಕ -ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಶಾಂಭವಿ ಕಾರ್ಯಕ್ರಮವನ್ನು ನಿರೂಪಿಸಿ, ನೀಲವೇಣಿ ವಂದನಾರ್ಪಣೆ ಮಾಡುವುದರ ಮೂಲಕ ಕಾರ್ಯಕ್ರಮವು ಮುಕ್ತಾಯಗೊಂಡಿತು.