ವಿನೋಬನಗರ: ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

0

ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವಿವಿಧ ಸ್ಪರ್ಧೆ

ಜಾಲ್ಸೂರು ಗ್ರಾಮದ ವಿನೋಬನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸೆ.6 ರಂದು ಆಚರಿಸಲಾಯಿತು.

ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ ಅವರು ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾಸಂಸ್ಥೆಯ ಸಂಚಾಲಕ, ಸುಧಾಕರ ಕಾಮತ್ ಹಾಗೂ ಗೌರವ ಸಲಹೆಗಾರರಾದ ನ. ಸೀತಾರಾಮ ಅವರು ಗೌರವ ಉಪಸ್ಥಿತರಿದ್ದರು.

ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ತಿಲಕಾಕ್ಷ ರಾಮಕುಂಜ ಅವರು ಧಾರ್ಮಿಕ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಶಿಶು ಮಂದಿರದ ಮಕ್ಕಳಿಗೆ ಶ್ರೀಕೃಷ್ಣ- ರಾಧೆಯ ವೇಷ ಹಾಕಿಸಲಾಯಿತು. ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಶೇಷವಾಗಿ ಮೊಸರು ಕುಡಿಕೆ ಸ್ಪರ್ಧೆ ನಡೆಯಿತು, ಶಾಲಾ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರಿಂದ ಭಜನೆ ನಡೆಯಿತು ,ಮಧ್ಯಾಹ್ನ ಮಹಾಪೂಜೆ ನಡೆದು, ಅನ್ನಸಂತರ್ಪಣೆ ನಡೆಯಿತು.

ಬಳಿಕ ಸ್ಪರ್ಧಾ ವಿಜೇತರುಗಳಿಗೆ ಬಹುಮಾನ ವಿತರಿಸಲಾಯಿತು.
ಶಿಶು ಮಂದಿರದ ಪೋಷಕ ಸಮಿತಿಯ ಅಧ್ಯಕ್ಷ ಯಶ್ವಿತ್ ಕಾಳಮ್ಮನೆ, ಎಸ್. ಡಿ. ಎಂ. ಸಿ. ಅಧ್ಯಕ್ಷೆ ಶ್ರೀಮತಿ ಸೌಮ್ಯ ಕದಿಕಡ್ಕ, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಗಿರೀಶ್ ಕುಮಾರ್ ,ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಜಯಪ್ರಸಾದ್ ಕಾರಿಂಜ ಹಾಗೂ ಅಧಿಕ ಸಂಖ್ಯೆಯ ಪೋಷಕರು ಉಪಸ್ಥಿತರಿದ್ದರು . ಶಿಕ್ಷಕಿ ಶ್ರೀಮತಿ ಲೀಲಾವತಿ ಸ್ವಾಗತಿಸಿ, ಸಹ ಶಿಕ್ಷಕಿ ಶ್ರೀಮತಿ ಉಷಾ ವಂದಿಸಿದರು. ಸಹ ಶಿಕ್ಷಕಿ ಶ್ರೀಮತಿ ಪೂರ್ಣಿಮಾ ಕಾರ್ಯಕ್ರಮವನ್ನು ನಿರೂಪಿಸಿದರು.