ಕಳಂಜ ಮಸೂದ್ ಕೊಲೆ ಪ್ರಕರಣ

0

ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

ಕಳೆದ ವರ್ಷ ಕಳಂಜ ಎಂಬಲ್ಲಿ ನಡೆದಿದ್ದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ಆರೋಪಿಗಳಾದ ರಂಜಿತ್, ಸದಾಶಿವ, ಸುಧೀರ್ ಇವರುಗಳಿಗೆ ಕರ್ನಾಟಕದ ಉಚ್ಚ ನ್ಯಾಯಾಲಯ ನ್ಯಾಯಮೂರ್ತಿಗಳಾದ ಜಸ್ಟಿಸ್ ವಿಶ್ವಜೀತ್ ಎಸ್ ಶೆಟ್ಟಿ ಜಾಮೀನು ಮಂಜೂರು ಮಾಡಿದರು‌ ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಅರುಣ್ ಶಾಮ್ ರವರು ವಾದ ಮಂಡಿಸಿದ್ದರು. ವಕೀಲರಾದ ಸುಯೋಗ್ ಹೇರಳೆ ಮತ್ತು ನಿಶಾಂತ್ ಕುಶಾಲಪ್ಪ ವಕಾಲತ್ತು ಮಾಡಿದ್ದರು.

ಒಟ್ಟು ಎಂಟು ಆರೋಪಿಗಳ ಪೈಕಿ ಈ ಮೊದಲು ಮೂರು ಜನ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು.