ಪರಿಸರ ಪ್ರೀತಿ ಬೆಳೆಸಿಕೊಂಡು ಹಸಿರು ಕಾಪಾಡಿ: ಜಯಲಕ್ಷ್ಮಿ ಎನ್ ಬಿ

0

ಎನ್ನೆಂಸಿ ನೇಚರ್ ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಮತ್ತು ಜೀವವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ನೇಚರ್ ಕ್ಲಬ್‌ನ 2023-24ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಪ್ರಥಮ ವರ್ಷದ ಜೀವ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ ಸೆ. 7 ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.


ಸಾಂಪ್ರದಾಯಿಕ ಶೈಲಿಯಲ್ಲಿ ದೀಪ ಉರಿಸಿ ಪಾರಿಜಾತ ಗಿಡಕ್ಕೆ ನೀರೆರೆಯುವ ಮೂಲಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕನ್ನಡ ಪೆರಾಜೆ ಯ ವಿಜ್ಞಾನ ಶಿಕ್ಷಕಿ ಮತ್ತು ಇಕೋ ಕ್ಲಬ್ ಸಂಯೋಜಕಿ ಜಯಲಕ್ಷ್ಮಿ ಎನ್.ಬಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಪರಿಸರ ಪ್ರೀತಿ ಬೆಳೆಸಿಕೊಂಡು ಹಸಿರು ಕಾಪಾಡಿ, ಇಂದು ನಾವು ಎದುರಿಸುತ್ತಿರುವ ಪ್ರಕೃತಿ ವಿಕೋಪಗಳಿಂದ ಪರಾಗೋಣ. ಸಮಾಜವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಪ್ರಕೃತಿ ಸಂಘದ ಕೆಲಸಗಳು ಅಗತ್ಯ ಮತ್ತು ಅರ್ಥಪೂರ್ಣ. ವಿದ್ಯಾರ್ಥಿಗಳ ಭಾಗವಹಿಸುವಿಕೆ, ಕಾರ್ಯಕ್ರಮದ ತಯಾರಿ ಶ್ಲಾಘನೀಯ ಎಂದು ನೇಚರ್ ಕ್ಲಬ್‌ನ ಮುಂದಿನ ಕಾರ್ಯ ಚಟುವಟಿಕೆಗಳ ಯಶಸ್ಸಿಗೆ ಶುಭ ಹಾರೈಸಿದರು.


ವೇದಿಕೆಯಲ್ಲಿ ಕಾಲೇಜಿನ ವಿಜ್ಞಾನ ವಿಭಾಗ ಸಂಯೋಜಕರಾದ ಪ್ರೊ. ಸತ್ಯಪ್ರಕಾಶ್, ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ ಉಪಸ್ಥಿತರಿದ್ದು ನೂತನ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ವಹಿಸಿದ್ದರು.


ನೇಚರ್ ಕ್ಲಬ್ ಸದಸ್ಯರಾದ ಅಶ್ವಿನಿ, ಮಹಿಮಾ,ಮಧಿವಧಿನಿ ಮತ್ತು ತಂಡದವರು ಪ್ರಾರ್ಥಿಸಿ, ನವ್ಯಶ್ರೀ ಸ್ವಾಗತಿಸಿದರು. ನೇಚರ್ ಕ್ಲಬ್ ಸಂಯೋಜಕ ಮತ್ತು ಸಸ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಕುಲದೀಪ್ ಪೆಲ್ತಡ್ಕ ಪ್ರಾಸ್ತಾವಿಕ ಮಾತನಾಡಿ, ಕ್ಲಬ್‌ನ ಕಾರ್ಯದರ್ಶಿ ಪವಿತ್ರಾಕ್ಷಿ ವಾರ್ಷಿಕ ವರದಿಯ ಜೊತೆ ಮುಂದಿನ ಕಾರ್ಯ ಯೋಜನೆಗಳ ಪಟ್ಟಿಯನ್ನು ವಾಚಿಸಿದರು. ಸುಕನ್ಯಾ ಮುಖ್ಯ ಅತಿಥಿಗಳನ್ನು ಪರಿಚಯಿಸಿ, ನೇಚರ್ ಕ್ಲಬ್ ಜೊತೆ ಕಾರ್ಯದರ್ಶಿ ಶಶಾಂಕ್ ವಂದಿಸಿದರು. ಕೀರ್ತಿಕಾ ಮತ್ತು ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಪ್ರಥಮ ವರ್ಷದ ಜೀವ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಮನರಂಜನಾ ಸ್ಪರ್ಧೆ ಚಟುವಟಿಕೆಗಳನ್ನು ಆಯೋಜಿಸಿದ್ದರು. ಕಾರ್ಯಕ್ರಮದ ಯಶಸ್ಸಿಗೆ ಉಪನ್ಯಾಸಕರಾದ ಕೃತಿಕಾ, ಹರ್ಷಕಿರಣ ಮತ್ತು ಅಜಿತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಜಯಂತಿ, ಭವ್ಯ, ಲತಾ, ಗೀತಾ, ಶಿವಾನಂದ ಮತ್ತು ಪವನ್ ಹಾಗೂ ಜೀವ ವಿಜ್ಞಾನ ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಸಹಕರಿಸಿದರು.