ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚೆ
ಪೆರುವಾಜೆ ಗ್ರಾಮ ಪಂಚಾಯತ್ 2022-23 ನೇ ಸಾಲಿನ
ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು ರವರ ಅಧ್ಯಕ್ಷತೆಯಲ್ಲಿ ಸೆ.08 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಸ್ವಾಗತಿಸಿ,ವರದಿ ಮಂಡಿಸಿದರು.
ಸಹಾಯಕ ತೋಟಗಾರಿಕಾ ಅಧಿಕಾರಿ ಜಗದೀಶ್ ರುದ್ರೇ ಗೌಡ ಪಾಟೀಲ್ ನೋಡೆಲ್ ಅಧಿಕಾರಿಯಾಗಿದ್ದರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಶಹಿನಾಜ್ ಸದಸ್ಯರಾದ ಶ್ರೀಮತಿ ಚಂದ್ರಾವತಿ,ಶ್ರೀಮತಿ ಗುಲಾಬಿ,ಪದ್ಮನಾಭ ಶೆಟ್ಟಿ, ಸಚಿನ್ ರಾಜ್ ಶೆಟ್ಟಿ, ಶ್ರೀಮತಿ ರೇವತಿ, ಮಾಧವ ಉಪಸ್ಥಿತರಿದ್ದರು.
ಇಲಾಖಾಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.