ರೋಟರಿ ಸುಳ್ಯ ಸಿಟಿ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಸನ್ಮಾನ

0

ರೋಟರಿ ಕ್ಲಬ್ ಸುಳ್ಯ ಸಿಟಿ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಸೆ.7 ರಂದು ರೋಟರಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ರೋಟರಿ ಕ್ಲಬ್ ಸುಳ್ಯ ಸಿಟಿಯ ಅಧ್ಯಕ್ಷ ರೊ| ಗಿರೀಶ್ ನಾರ್ಕೋಡುರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆವಿಜಿ ಪಾಲಿಟೆಕ್ನಿಕ್ ನ ಸಿವಿಲ್ ಇಂಜನಿಯರಿಂಗ್ ವಿಭಾಗದ ಮುಖ್ಯಸ್ಥ ದೇವರಾಜ್ ಜಿ ಕೆ ಮತ್ತು ಸ. ಹಿ.ಪ್ರಾ ಶಾಲೆ ನಾರ್ಕೋಡು, ಆಲೆಟ್ಟಿ ಇಲ್ಲಿಯ ಯುವ ಶಿಕ್ಷಕ ಸುನಿಲ್ ಕುಮಾರ್ ಎ ಎಂ ರವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿ ರೊ| ಚಂದ್ರಶೇಖರ ಪೇರಾಲುರವರು ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಸಭೆಯನ್ನುದ್ದೇಶಿಸಿ ಮಾತನಾಡಿದರು, ಕಾರ್ಯಕ್ರಮದ ವೇದಿಕೆಯಲ್ಲಿ ನಿಕತಪೂರ್ವದ್ಯಕ್ಷ ರೊ| ಮುರಳೀಧರ ರೈ, ನಿಯೋಜಿತ ಅಧ್ಯಕ್ಷ ರೊ| ಶಿವಪ್ರಶಾದ್ ಕೆ ವಿ, ಕಾರ್ಯದರ್ಶಿ ರೊ| ಚೇತನ್ ಪಿ ಎನ್ ಹಾಗೂ ರೋಟರಿ ಕ್ಲಬ್ ಸುಳ್ಯ ಸಿಟಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.