ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ ಸುಬ್ರಹ್ಮಣ್ಯ ಒಟ್ಟು ೧೮೨ ವಿದ್ಯಾರ್ಥಿಗಳು ಅಂತಿಮ ವರ್ಷದ ಆರನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಿದ್ದು ೧೫೭ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. ೮೬.೩೦ ಫಲಿತಾಂಶ ದಾಖಲಾಗಿದೆ.
ಬಿ.ಎ ವಿಭಾಗದಲ್ಲಿ ಒಟ್ಟು ೪೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ ೪೭ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ ಶೇಕಡಾ ೯೬ ಫಲಿತಾಂಶ ಬಂದಿರುತ್ತದೆ.
೧೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೧೭ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ೦೩ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಬಿ.ಕಾಂ ವಿಭಾಗದಲ್ಲಿ ಒಟ್ಟು ೧೨೩ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ ೧೦೧ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. ಶೇಕಡಾ ೮೨% ಫಲಿತಾಂಶ ಬಂದಿರುತ್ತದೆ . ೭೨ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೧೯ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ೦೮ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಮತ್ತು ೦೨ ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.
ಬಿ.ಬಿ.ಎ ವಿಭಾಗದಲ್ಲಿ ಒಟ್ಟು ೧೦ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ ೦೯ ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ ಶೇಕಡಾ ೯೦% ಫಲಿತಾಂಶ ಬಂದಿರುತ್ತದೆ ೦೮ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ೦೧ ವಿದ್ಯಾರ್ಥಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.