ಯೇನೆಕಲ್ಲು‌ ಸಹಕಾರಿ ಸಂಘದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ ಉದ್ಘಾಟನೆ

0

ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘ, ಯೇನೆಕಲ್ಲು ಹಾಲು ಉತ್ಪಾದಕರ ಸಹಕಾರಿ ಸಂಘ, ಕಂಪನಿಯ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇವುಗಳ ಜಂಟಿ ಆಶ್ರಯದಲ್ಲಿ ಉಚಿತ ಫೂ ಫಲ್ಸ್ ಥೆರಪಿ ಶಿಬಿರ ಸೆ. 11ರಂದು ಉದ್ಘಾಟನೆಗೊಂಡಿತು.
ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಭವಾನಿಶಂಕರ ಪೂಂಬಾಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಜಾತಾ ಕಲ್ಲಾಜೆ ಕಾರ್ಯಕ್ರಮ ಉದ್ಘಾಟಿಸಿದರು. ಯೇನೆಕಲ್ಲು ಹಾಲು ಉತ್ಪಾದಕರ ಸ.ಸಂಘದ ಅಧ್ಯಕ್ಷ ಭರತ್ ನೆಕ್ರಾಜೆ ಮತ್ತು ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರತನ್ ಕೆ.ಆರ್ ಅತಿಥಿಗಳಾಗಿ ಭಾಗವಹಿಸಿದ್ದರು. ಪುತ್ತೂರು ನೆಮ್ಮದಿ ವೆಲ್ ನೆಸ್ ಸೆಂಟರ್ ನ ಕೆ. ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಿದರು. ಯೇನೆಕಲ್ಲು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಅಣ್ಣೋಜಿ ಗೌಡ ಕಟ್ಟ, ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯ ಮೋಹನ್ ಕೋಟಿಗೌಡನಮನೆ, ಶ್ರೀಮತಿ ಭವ್ಯ ಜೇನುಕೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಘದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಶೇಖರ್ ಕೇದಿಗೆಬನ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ರತನ್ ಕೆ.ಆರ್. ಸ್ವಾಗತಿಸಿದರು. ಶಿಬಿರ ಪ್ರತೀ ದಿನ ಬೆಳಿಗ್ಗೆ 9.30ರಿಂದ ಸಂಜೆ 4.30ರ ತನಕ ಸೆ. 22ರ ತನಕ ನಡೆಯಲಿದೆ.