ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ನೇತೃತ್ವದಲ್ಲಿ ಉಚಿತ ನೇತ್ರ ಚಿಕಿತ್ಸಾ ಶಿಬಿರ

0

ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಕೆ.ಎಸ್. ಗೌಡ ಸಮೂಹ ವಿದ್ಯಾ ಸಂಸ್ಥೆಗಳು ನಿಂತಿಕಲ್ಲು ಇವುಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ಸಂಚಾರಿ ನೇತ್ರ ಘಟಕ ಹಾಗೂ ಕೆ.ಎಂ.ಸಿ.ಯ ಪ್ರಸಿದ್ಧ ನೇತ್ರ ತಜ್ಞರ ಭಾಗವಹಿಸುವಿಕೆಯಲ್ಲಿ ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಉಚಿತ ನೇತ್ರ ಚಿಕಿತ್ಸಾ ಸೇವಾ ಶಿಬಿರ ಸೆ. 12ರಂದು ನಿಂತಿಕಲ್ಲಿನ ಕೆ.ಎಸ್. ಗೌಡ ಕಾಲೇಜಿನ ಸಭಾಂಗಣದಲ್ಲಿ ಉದ್ಘಾಟನೆ ಗೊಂಡಿತು.


ಉದ್ಘಾಟನಾ ಕಾರ್ಯಕ್ರಮದದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗದ ಅಧ್ಯಕ್ಷ ವಿಠಲ ಶೆಟ್ಟಿ ವಹಿಸಿದ್ದರು. ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುನಾಥ್ ಸಿ ಕಾರ್ಯಕ್ರಮ ಉದ್ಘಾಟಿಸಿದರು. ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಸಂತೋಷ್ ಜಾಕೆ, ಕೆ.ಎಸ್‌. ಗೌಡ ವಿದ್ಯಾಸಂಸ್ಥೆಗಳ ನಿರ್ದೇಶಕರಾದ ಕುಮಾರಸ್ವಾಮಿ, ಸಂಪನ್ಮೂಲ ವ್ಯಕ್ತಿಯಾಗಿ ಡಾ. ಶಾಂತರಾಜು, ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗದ ಕಾರ್ಯದರ್ಶಿ ದಯಾನಂದ ನಾಯ್ಕ್, ಡಾ. ಊರ್ಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕೆ.ಎಸ್. ಗೌಡ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸದಾನಂದ ರೈ ಕುವೆಂಜ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲಯನ್ಸ್ ಸದಸ್ಯ ಯತೀಶ್ ಭಂಡಾರಿ ವಂದಿಸಿದರು. ಶ್ರೀ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಪ್ರಸನ್ನ ವೈ.ಟಿ ಕಾರ್ಯಕ್ರಮ ನಿರೂಪಿಸಿದರು.

ಉಚಿತ ಕನ್ನಡಕ ವಿತರಣೆ ಮಾಡಿದ ಪುತ್ತೂರು ಆನಂದಾಶ್ರಮ ಸೇವಾ ಟ್ರಸ್ಟ್‌ನ ಸಂಚಾಲಕರಾದ ಡಾ. ಗೌರಿ ಪೈ, ಕೆ.ಎಸ್. ಗೌಡ ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಉಮೇಶ್ ಗೌಡ, ಶ್ರೀ ಪರಿವಾರದ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಸುಧೀರ್ ಎಂ.ವಿ ಸೇರಿದಂತೆ ಲಯನ್ಸ್ ಕ್ಲಬ್‌ನ ಪದಾಧಿಕಾರಿಗಳು, ಸದಸ್ಯರು, ಸಂಸ್ಥೆಯ ಬೋಧಕ, ಬೋದಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಮತ್ತು ಕಣ್ಣು ಪರೀಕ್ಷೆ ಆಗಮಿಸಿದ ಫಲಾನುಭವಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಉಚಿತ ಕಣ್ಣಿನ ಪರೀಕ್ಷೆ, ಚಿಕಿತ್ಸೆ ಮತ್ತು ಸಲಹೆ, ಉಚಿತ ಕಣ್ಣಿನ ಪೊರೆ ಅಪರೇಶನ್, ಉಚಿತ ಪ್ರಯಾಣ, ವಸತಿ, ಊಟ ಮತ್ತು ಉಪಾಪಾರ, ಉಚಿತ ಕನ್ನಡಕ ನಿಡಲಾಗುವುದು.