ಪುತ್ತೂರಿನ ವಿದ್ಯಾಮಾತಾ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈಯವರಿಗೆ `ರಾಜ್ಯ ಶಿಕ್ಷಣ ಸೇವಾ ರತ್ನ’ ಪ್ರಶಸ್ತಿ

0

ಬೆಂಗಳೂರಿನ ಜನಸಿರಿ ಫೌಂಡೇಶನ್ ವತಿಯಿಂದ ನೀಡುವ ರಾಜ್ಯ ಮಟ್ಟದ ಶಿಕ್ಷಣ ಸೇವಾ ರತ್ನ ಪ್ರಶಸ್ತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಹೆಸರಾಂತ ತರಬೇತಿ ಸಂಸ್ಥೆ, ಇಲ್ಲಿನ ಎಪಿಎಂಸಿ ಹಿಂದೂಸ್ಥಾನ್ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ವಿದ್ಯಾಮಾತಾ ಅಕಾಡೆಮಿ ಆಯ್ಕೆಗೊಂಡು, ಸೆ.೯ ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಅಕಾಡೆಮಿ ಅಧ್ಯಕ್ಷ ಭಾಗ್ಯೇಶ್ ರೈ ಇವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.


ಹಲವು ಜನಾಂಗದ ವಿದ್ಯಾರ್ಥಿಗಳಿಗೆ ಸರಕಾರದ ಅನೇಕ ಸವಲತ್ತುಗಳನ್ನು ಒದಗಿಸುವಲ್ಲಿ ಸಂಸ್ಥೆಯು ವಹಿಸಿರುವ ಶ್ರಮ, ಸಮಾನ ಶಿಕ್ಷಣ ನೀತಿ ಜಾರಿಗೆ ಬರಬೇಕೆಂಬ ಹೋರಾಟದೊಂದಿಗೆ ವಿದ್ಯಾಮಾತ ಸಂಸ್ಥೆಯು ಸಾವಿರಾರು ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳಗಳ ಆಯೋಜನೆ ಮೂಲಕ ಅನೇಕ ಉದ್ಯೋಗಾವಕಾಶಗಳನ್ನು ಕಲ್ಪಿಸಿ ಕೊಟ್ಟಿರುವುದು ಮತ್ತು ವಿದ್ಯಾಮಾತಾ ಅಕಾಡೆಮಿಯ ಮೂಲಕ ನೂರಾರು ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವಂತೆ ಅವರನ್ನು ಅಣಿಗೊಳಿಸಿ, ಸರಕಾರಿ ಉದ್ಯೋಗ ದೊರಕುವಂತೆ ಮಾಡಿರುವ ಪ್ರಾಮಾಣಿಕ ಪ್ರಯತ್ನ, ಅಗ್ನಿಪಥ್ ಯೋಜನೆಯ ಮೂಲಕ 18 ಯುವಕರು ಸೈನ್ಯ ಸೇರಿ, ದೇಶ ಸೇವೆ ಮಾಡಲು ಅವಕಾಶ ಕಲ್ಪಿಸಿರುವುದು. ಹಲವಾರು ಸರಕಾರಿ ಶಾಲೆಗಳಿಗೆ ವಿದ್ಯಾಮಾತಾದ ಹಲವು ಯೋಜನೆ ಮೂಲಕ ಸಹಾಯ ಇವುಗಳನೆಲ್ಲ ಪರಿಗಣಿಸಿ ಆಯ್ಕೆ ಸಮಿತಿಯು ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಿಂದ ವಿದ್ಯಾಮಾತಾ ಸಂಸ್ಥೆಯ ಭಾಗ್ಯೇಶ್ ರೈ ಅವರನ್ನು ಆಯ್ಕೆ ಮಾಡಿದೆ. ಗಜೇಂದ್ರಗಡ ಕಾಲಜ್ಞಾನ ಮಠದ ಬ್ರಹ್ಮ ಸದ್ಗುರು ಶಿವಯೋಗಿ ಶರಣಬಸವ ಮಹಾಸ್ವಾಮಿಗಳು, ಶ್ರೀ ಬೇಲಿ ಮಠ ಮಹಾಸಂಸ್ಥಾಂ ಕಾಟನ್ ಪೇಟೆ ಬೆಂಗಳೂರು ಇಲ್ಲಿನ ಶ್ರೀ ನಿ . ಪ್ರ. ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು, ಶ್ರೀ ಸಿದ್ಧಾರೂಢ ಮಿಷನ್ ಆಶ್ರಮ ರಾಮೋಹಳ್ಳಿ ಬೆಂಗಳೂರು ಇಲ್ಲಿನ ಶ್ರೀ ಡಾ| ಆರೂಢಭಾರತಿ ಸ್ವಾಮೀಜಿ ಇವರುಗಳ ಸಾನಿಧ್ಯದಲ್ಲಿ, ನಿವೃತ್ತ ಐಎಎಸ್ ಅಧಿಕಾರಿ ಕೆ ಶಿವರಾಮು, ಕರ್ನಾಟಕ ರಾಜ್ಯ ಪದವೀಧರ ವೇದಿಕೆಯ ರಾಮೋಜಿ ಗೌಡ, ಹಿರಿಯ ಖ್ಯಾತ ಕವಿ ಬಿ ಆರ್ ಲಕ್ಷ್ಮಣ ರಾವ್ ಸೇರಿದಂತೆ ಹಲವಾರು ಅತಿಥಿಗಳ ಉಪಸ್ಥಿತಿಯಲ್ಲಿ ಭಾಗ್ಯೇಶ್ ರೈಯವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.