ಸುಳ್ಯ ಎನ್ನೆoಪಿಯುಸಿಯ ಹುಡುಗರ ತಂಡ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ

0


ಪ.ಪೂ ಶಿಕ್ಷಣ ಇಲಾಖೆಯ ವತಿಯಿಂದ ರೋಟರಿ ಸಂಯುಕ್ತ ಪ.ಪೂ ಕಾಲೇಜು ಮಿತ್ತಡ್ಕ-ಆಲೆಟ್ಟಿ , ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಹುಡುಗರ ವಾಲಿಬಾಲ್ ಪಂದ್ಯಾಟದಲ್ಲಿ ನೆಹರು ಮೆಮೋರಿಯಲ್ ಪ.ಪೂ. ಕಾಲೇಜು ಸುಳ್ಯ ಇಲ್ಲಿನ ಹುಡುಗರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ .

ಈ ಪೈಕಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಂಝತುಲ್ ಕರಾರ್ ಸರ್ವಾoಗೀಣ ಆಟಗಾರ, ಹಾಗೂ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಎಂ.ವಿಶಾಲ್ ಉತ್ತಮ ದಾಳಿಗಾರ ಬಹುಮಾನವನ್ನು ಪಡೆದುಕೊಂಡಿದ್ದಾರೆ.


ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾ oಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.