2023-24ನೇ ಸಾಲಿನಲ್ಲಿ ಅ.28 ರಂದು ಸರ್ಕಾರದ ವತಿಯಿಂದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಈ ಜಯಂತಿಯ ಪ್ರಯುಕ್ತ ಪರಿಶಿಷ್ಟ ಜನಾಂಗದ (ST) ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿಯವರ ಹೆಸರಿನಲ್ಲಿ ರಾಜ್ಯ ಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲು ಉದ್ದೇಶಿಸಲಾಗಿರುತ್ತದೆ.
ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡುವ ವ್ಯಕ್ತಿಯು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದವರಾಗಿರಬೇಕು, ಅವರು ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ, ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಗಳು ಅರ್ಜಿ ಸಲ್ಲಿಸಲು ಕೋರಿದೆ. ನಿಗದಿತ ಅರ್ಜಿ ನಮೂನೆಗಳನ್ನು ಆಯಾ ತಾಲೂಕಿನ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ ಸುಳ್ಯ ತಾಲೂಕು, ಕಛೇರಿಂದ ಪಡೆದು ಸೆ.30ರೊಳಗೆ ಸಂಪೂರ್ಣ ಮಾಹಿತಿಯನ್ನು ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸುಳ್ಯ ತಾಲೂಕು ಇಲಾಖಾ ಕಛೇರಿಗೆ ನೀಡುವುದು. ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಸುಳ್ಯ
(08257-233527) ಇವರನ್ನು ಸಂಪರ್ಕಿಸಲು ಕೋರಿದೆ.