ಸೆ.15 ರಂದು ಸುಳ್ಯದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆ

0

ಸಮಾಜಕಲ್ಯಾಣ ಇಲಾಖೆ ಸೂಚನೆ

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಕರ್ನಾಟಕ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯು ಸೆ.15 ಬೆಳಿಗ್ಗೆ 10.00 ಗಂಟೆಗೆ ಭಾರತದ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮುಖಾಂತರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ನಿರ್ಧರಿಸಿರುತ್ತದೆ. ಆದುದರಿಂದ ಸುಳ್ಯ ತಾಲೂಕಿನಲ್ಲಿ ಸೆ.15ರಂದು ಪೂರ್ವಾಹ್ನ 10.00 ಗಂಟೆಗೆ ಸರ್ಕಾರಿ ಪದವಿಪೂರ್ವ ಕಾಲೇಜು,ಸುಳ್ಯ ಇಲ್ಲಿನ ಆವರಣದಲ್ಲಿ ವಿದ್ಯಾರ್ಥಿಗಳೊಂದಿಗೆ ಆಚರಿಸಲು ನಿರ್ಧರಿಸಲಾಗಿರುತ್ತದೆ.
ಈ ಕಾರ್ಯಕ್ರಮಕ್ಕೆ ತಾಲೂಕಿನ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಪೂರ್ವಾಹ್ನ 9.30 ಕ್ಕೆ ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಹಾಜರಿದ್ದು, ಭಾರತದ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಓದುವುದರ ಮುಖಾಂತರ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಯಶಸ್ವಿಗೊಳಿಸುವಂತೆ ಸಮಾಜಕಲ್ಯಾಣ ಇಲಾಖೆ‌ ತಿಳಿಸಿದೆ