ಬೊಳುಬೈಲು: ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶ್ರೀಮತಿ ರಾಧಮ್ಮ ಅವರಿಗೆ ಹಳೆವಿದ್ಯಾರ್ಥಿ ಸಂಘದಿಂದ ಸನ್ಮಾನ

0

ಈ ಬಾರಿಯ ಶಿಕ್ಷಕ ದಿನಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ಜಾಲ್ಸೂರು ಗ್ರಾಮದ ಬೊಳುಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ರಾಧಮ್ಮ ಅವರನ್ನು ಬೊಳುಬೈಲು ಸ.ಕಿ.ಪ್ರಾ.ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಬೊಳುಬೈಲಿನ ನವಚೇತನ ಯುವಕ ಮಂಡಲದ ವತಿಯಿಂದ ಸೆ.6ರಂದು ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶ್ರೀಮತಿ ರಾಧಮ್ಮ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುಭಾಷ್ ರೈ ಕುಕ್ಕಂದೂರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.