ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ಸೆ.14 ರಂದು ರಾಷ್ಟ್ರೀಯ ಹಿಂದಿ ದಿನಾಚರಣೆಯನ್ನು ಹಿಂದಿ ಶಿಕ್ಷಕಿಯರ ನೇತೃತ್ವದಲ್ಲಿ ಆಚರಿಸಲಾಯಿತು. ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ಹಿಂದಿ ಭಾಷೆಯ ಮಹತ್ವದ ಕುರಿತು ತಿಳಿಸಿದರು. ಬಳಿಕ ೮ನೇ ತರಗತಿಯ ಸೋನಾ ನಾರ್ಕೋಡು ಹಿಂದಿ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ೮ನೇ ತರಗತಿಯ ಸೀಮಾ ಆಯಿಷಾ ಮತ್ತು ಶ್ರದ್ಧಾ ಪೈ ಹಿಂದಿ ದಿನದ ಪ್ರಾಮುಖ್ಯತೆಯ ಕುರಿತು ತಿಳಿಸಿದರು.
ಯು ಕೆ ಜಿ, ಒಂದು ಮತ್ತು ಎರಡನೇ ತರಗತಿಯ ಮಕ್ಕಳು ಹಿಂದಿ ಹಾಡನ್ನು ಹಾಡಿದರು. ಬಳಿಕ ಎಂಟನೇ ತರಗತಿಯ ವಿದ್ಯಾರ್ಥಿನಿಯರು ಹಿಂದಿ ಗೀತೆ ಹಾಡಿದರು. ೮ನೇ ತರಗತಿಯ ನಶ್ವ ವಿದ್ಯಾರ್ಥಿಗಳಿಗಾಗಿ ಹಿಂದಿ ಭಾಷೆಯ ಕುರಿತು ಕೆಲವು ಸಾಮಾನ್ಯ ಜ್ಞಾನ ಪ್ರಶ್ನೆಗಳನ್ನು ಕೇಳಿದಳು. ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ ವಿದ್ಯಾರ್ಥಿಗಳಲ್ಲಿ ಭಾಷಾಪ್ರೇಮ ಬೆಳೆಸಲು ಇದೊಂದು ಉತ್ತಮ ಕಾರ್ಯಕ್ರಮ ಎಂದು ತಿಳಿಸಿದರು. ಈ ಕಾರ್ಯಕ್ರಮವನ್ನು ೮ನೇ ತರಗತಿಯ ಮನ್ವಿತಾ ಸಿ ಹೆಚ್ ನಿರೂಪಿಸಿ , ಆಕಾಶ್ ವಂದಿಸಿದರು. ಈ ಸಂದರ್ಭದಲ್ಲಿ ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರ ವರ್ಗದವರು ಉಪಸ್ಥಿತರಿದ್ದರು.
೩,೪,೫ ಮತ್ತು ೬ನೇ ತರಗತಿಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು.